ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಆರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ.
ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಹಾಗೂ ಚಿಕ್ಕಮಗಳೂರು, ಕೊಡಗು, ಹಾಸನ, ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷೆಯಿದೆ. ಮುಂದುವರೆದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು. ದಾವಣಗೆರೆ,. ಚಿತ್ರದುರ್ಗ, ಬೆಳಗಾವಿ, ದಾರವಾಡ, ವಿಜಯಪುರ. ಕಲಬುರಗಿ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ಘೋಷಿಸಲಾಗಿದ್ದು, ಐದು ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಜೋರಾಗಿ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ರಸ್ತೆ ಸಂಚಾರದಲ್ಲಿ ಜನರು ತೊಂದರೆ ಎದುರಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವು ಸೈಕ್ಲೋನ್ ರೂಪ ತಾಳಿದ್ದು, ದಿನದಿಂದ ದಿನಕ್ಕೆ ಇದರ ತೀವ್ರತೆ ಹೆಚ್ಚುತ್ತಿದೆ. ಆಂಧ್ರ ಪ್ರದೇಶದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಕರಾವಳಿ ಭಾಗಗಳ ಮೇಲೂ ಬೀಳಲಿದೆ.
ಬೀಜ, ಗೊಬ್ಬರ ವಿತರಣೆ
ಮೈಸೂರು ಜಿಲ್ಲೆಯಲ್ಲಿ 33 ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಾಸಾಯನಿಕ ಗೊಬ್ಬರಗಳನ್ನು ಸಬ್ಸಡಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಮಳೆ ಇಲ್ಲದೆ ತಂಬಾಕು ಪಟಗಳನ್ನು ಮಾಡಿ ಸಸಿಗಳನ್ನು ಜಮೀನಿನಲ್ಲಿ ನೆಡಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಬಿದ್ದ ಮಳೆಯಿಂದಾಗಿ ರೈತರು ಸಸಿಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಕೃಷಿಕ ಸಮಾಜ ರಾಜ್ಯದಲ್ಲಿ ಎಲ್ಲಾ ಜಿಲ್ಲೆ, ತಾಲ್ಲೂಕುಗಳಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಸನ್ಮಾನಿ .ರಾಜ್ಯ ಸರ್ಕಾರವೂ ಇದಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದರು. ರಾಜ್ಯದಲ್ಲಿ ಜಿಲ್ಲಾ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ 5.54 ಕೋಟಿ ರೂ.ತಾಲ್ಲೂಕು ಕಟ್ಟಡಗಳಿಗೆ 8.14 ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಸೈಕ್ಲೋನ್‌ಗೆ ಕಾರಣವಾಗಿದ್ದು, ಸಮುದ್ರದಲ್ಲಿ 5.8 ರಿಂದ 8 ಅಡಿ ಎತ್ತರದ ಸುಳಿಗಾಳಿ ಬೀಸುತ್ತಿದೆ. ಈ ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೊಡಗು, ಹಾಸನ, ಬೆಳಗಾವಿ, ಕಲಬುರಗಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಬೆಂಗಳೂರಿನ ಕೆಲವೆಡೆ ಸಂಜೆ ವೇಳೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಹಾಸನದಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಹೀಗಾಗಿ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನ ಶಾಲೆಗಳಿಗೆ ನಾಳೆ (ಜುಲೈ 26) ರಜೆ ನೀಡಲಾಗಿದೆ. ಕಳೆದ 2 ದಿನಗಳಿಂದ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡದ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆಗಳಿಗೆ ನಾಳೆ (ಜುಲೈ 26) ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.