Home » ರೈತರ ಖಾತೆಗೆ ಜಮಾ ಆಯ್ತು ₹1,033 ಕೋಟಿ ಬೆಳೆ ಪರಿಹಾರ!

ರೈತರ ಖಾತೆಗೆ ಜಮಾ ಆಯ್ತು ₹1,033 ಕೋಟಿ ಬೆಳೆ ಪರಿಹಾರ!

ಬೆಳೆ ಪರಿಹಾರ : ರೈತರೇ ಗಮನಿಸಿ ಈ ವರ್ಷ ರೈತರು ಒಂದಲ್ಲಾ ಒಂದು ತೊಂದರೆಗಳಿಗೆ ಸಿಲುಕುತ್ತೀದ್ದಾರೆ. ಅದಕ್ಕೆ ಸರ್ಕಾರವು ಕೂಡ ರೈತರ ಪರವಾಗಿ ನಿಂತು ಸ್ವಲ್ಪ ಕೆಲಸ ಮಾಡುತ್ತಿದೆ. ಮುಂಗಾರು ಮಳೆಯಿಂದ ಬೆಳೆ ನಷ್ಟಕ್ಕೆ ತುತ್ತಾದ ರೈತರಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ. ಮಳೆಹಾನಿಯಿಂದ ಸಂಕಷ್ಟ ಅನುಭವಿಸಿದ ಅನ್ನದಾತರ ನೆರವಿಗೆ ಸರ್ಕಾರವು ₹1,033 ಕೋಟಿ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು.

ಅದೇ ರೀತಿ ಸರ್ಕಾರವು ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಈ ಬಾರಿ ಪರಿಹಾರ ವಿತರಣೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ದೊರೆತಿದ್ದು, ಧಾರವಾಡ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿರುವುದಾಗಿ ವರದಿಗಳು ಸೂಚಿಸಿವೆ. ಧಾರವಾಡ ಜಿಲ್ಲೆಯೊಂದರಲ್ಲೇ ಒಟ್ಟು 65,217 ಅರ್ಹ ರೈತರ ಖಾತೆಗಳಿಗೆ ₹63.16 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಹೆಸರು ಕಾಳು, ಹತ್ತಿ, ಸೋಯಾಬಿನ್ ಮತ್ತು ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿದ ರೈತರಿಗೆ ಈ ಮೊತ್ತ ಜಮಾ ಆಗಿದೆ.

ಕೇಂದ್ರದ ಎನ್‌ಡಿಆರ್‌ಎಫ್ ಮಾರ್ಗಸೂಚಿಯ ಪ್ರಕಾರ ಪರಿಹಾರದ ಮೊತ್ತ ಕಡಿಮೆ ಇದ್ದರೂ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಸೇರಿಸುವ ಮೂಲಕ ಪರಿಹಾರದ ದರವನ್ನು ಹೆಚ್ಚಿಸಿದೆ. ಹೊಸ ದರ ಪ್ರಕಾರ ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್‌ಗೆ ₹17,000, ನೀರಾವರಿ ಬೆಳೆಗಳಿಗೆ ₹25,000 ಮತ್ತು ತೋಟಗಾರಿಕೆ ಬೆಳೆಗಳಿಗೆ ₹31,000 ಪರಿಹಾರ ಲಭ್ಯವಿದೆ. ಒಬ್ಬ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್ ವರೆಗೆ ಮಾತ್ರ ಪರಿಹಾರ ದೊರೆಯಲಿದೆ.

ರೈತರಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ ಎಂದು ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು, ರೈತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಇನ್ನೂ ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಬಗ್ಗೆ ಕುರಿತು ಸಚಿವ ಸಂಪುಟ ಪುನರ್ ರಚನೆಯಾದಾಗ ಪರಿಗಣಿಸಲಾಗುವುದು ಎಂದರು.

ಬಿಳಿಜೋಳ(ಹೈಬ್ರಿಡ್) ರೂ.3699/- ಹಾಗೂ ಬಿಳಿಜೋಳ(ಮಾಲ್ದಂಡಿ) ರೂ.3749/- ರಂತೆ ದರ ನಿಗದಿಪಡಿಸಲಾಗಿದೆ. ಕೊಪ್ಪಳ, ಕುಷ್ಟಗಿ ಹಾಗೂ ಯಲಬುರ್ಗಾಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮೂರೂ ಖರೀದಿ ಕೇಂದ್ರಗಳಿಗೆ ಖರೀದಿ ಅಧಿಕಾರಿಯನ್ನಾಗಿ ಕೊಪ್ಪಳ ಎಪಿಎಂಸಿ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆಯ ಮಳಿಗೆ ವ್ಯವಸ್ಥಾಪಕ ಮೃತ್ಯುಂಜಯ ಕೋನಾಪುರ ಅವರನ್ನು ನೇಮಕ ಮಾಡಲಾಗಿದೆ.

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಿಂದ ಪ್ರಾರಂಭವಾಗಿರುವ ಹೊಸ ಉಪಕ್ರಮವಾಗಿದ್ದು, ಯಾವುದೇ ದೊಡ್ಡ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಜನರಿಗೆ ತಮ್ಮ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಸಹಾಯ ಮಾಡಲು, ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ (CMO) ಹೊಸ ಟ್ವಿಟರ್ ಹ್ಯಾಂಡಲ್ ಅನ್ನು ಪ್ರಾರಂಭಿಸಿದ್ದು, ಇದರ ಮೂಲಕ ಹೇಗೆ ದೂರು ನೀಡಬೇಕು? ದೂರು ನೀಡುವವರು ಏನೇನು ಮಾಹಿತಿ, ದಾಖಲೆಗಳನ್ನು ನೀಡಬೇಕು ಎಂಬುದನ್ನು ತಿಳಿಸಿದೆ. ಇದನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ನಿರ್ವಹಿಸಲಿದ್ದಾರೆ.

ಮಳೆಯಿಂದಾಗಿ ಕಲಬುರಗಿ ಜಿಲ್ಲೆಯಲ್ಲಿ ವ್ಯಾಪಕ ಬೆಳೆ ಹಾನಿ ಆಗಿರುವ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದು, ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರದ ಬಗ್ಗೆಯೂ ಅವರಿಗೆ ಮಾಹಿತಿ ನೀಡಲಾಗಿದೆ. ಹಾಗಾಗಿ, ಮುಂದಿನ ಒಂದು ವಾರದೊಳಗೆ ರೈತರ ಖಾತೆಗಳಿಗೆ ಪರಿಹಾರ ಜಮಾ ಆಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಇನ್ನೂ ನಿಲ್ಲದ ಕಾರಣಕ್ಕಾಗಿ ಸರ್ವೆ ಮಾಡುವುದು ಕಷ್ಟವಾಗುತ್ತಿದೆ. ಮೊದಲ ಹಂತದಲ್ಲೇ 1.05 ಲಕ್ಷ ಹೆಕ್ಟೇರ್ ಹಾನಿಯಾಗಿದೆ. ಮಳೆ ನಿಂತ ಬಳಿಕ ಎರಡನೆಯ ಸುತ್ತಿನ ಸರ್ವೆ ಮಾಡಲಾಗುವುದು. ಈ ಬಗ್ಗೆ ನಾಳೆ ಸಚಿವ ಸಂಪುಟ ಸಭೆಯ ಬಳಿಕ ನಂತರ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

Leave a Reply

Your email address will not be published. Required fields are marked *