ಪ್ರಿಯ ಓದುಗರೇ ನಮ್ಮ ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಏನೆಂದರೆ ಕೇಂದ್ರ ಸರ್ಕಾರದ ಬೆಂಬಲ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಉತ್ಪನ್ನ ಮಾರಾಟಕ್ಕಾಗಿ ಧಾರವಾಡ ಜಿಲ್ಲೆಯ 9,577 ರೈತರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. 2024-25ರ ಹಂಗಾಮಿನಲ್ಲಿ, ಕೇಂದ್ರ ಸರ್ಕಾರವು ಹೆಸರುಕಾಳು (Green Gram/Moong) ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಅಂದಾಜು ₹8,682 ರಷ್ಟು ಕನಿಷ್ಠ ಬೆಂಬಲ ಬೆಲೆಯನ್ನು (MSP) ನಿಗದಿಪಡಿಸಿದೆ.
ಈ ಪೈಕಿ 1,630 ರೈತರು, 13,340.50 ಕ್ವಿಂಟಲ್ ಹೆಸರು ಕಾಳು ಉತ್ಪನ್ನವನ್ನು ಖರೀದಿ ಕೇಂದ್ರಗಳಿಗೆ ಮಾರಾಟ ಮಾಡಿದ್ದಾರೆ. ಈಗಾಗಲೇ 1,512 ರೈತರಿಗೆ ರೂ. 9,51,85,408 ಗಳ ಮೊತ್ತವನ್ನು ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಪಾವತಿಸಲಾಗಿದೆ. ಮತ್ತು ಬಾಕಿ ಇರುವ 210 ರೈತರಿಗೆ ಹಣ ಪಾವತಿ ಕಾರ್ಯ ಪ್ರಗತಿಯಲ್ಲಿದ್ದು, ಬರುವ ಶನಿವಾರ (ಫೆ.07) ದೊಳಗೆ ಹಣ ಪಾವತಿ ಆಗಲಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಧಾರವಾಡ ಉಪನಿರ್ದೇಶಕ ವಿ.ಎಮ್. ಲಮಾಣಿ ಅವರು ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣೆ ಕುಸಿದ ಹಿನ್ನೆಲೆಯಲ್ಲಿ ರೈತರ ಹಿತದೃಷ್ಟಿಯಿಂದ ಎಂಎಸ್‌ಪಿಯಡಿ ಖರೀದಿಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ಕೇಂದ್ರ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರವು ತಕ್ಷಣವೇ ರಾಜ್ಯದ್ಯಂತ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಕೋರುತ್ತೇನೆ. ದೇಶದ ಪ್ರತಿ ರೈತರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನಿ ಮೋದಿ ಅವರ ಕೇಂದ್ರ ಸರ್ಕಾರ ಅವರ ಪ್ರತಿ ಸಮಸ್ಯೆಗೆ ಸೂಕ್ತ ಮತ್ತು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳುವುದರ ಮೂಲಕ ರೈತರ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದೆ ” ಎಂದು ತಿಳಿಸಿದ್ದಾರೆ.
2025-26 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಹೆಚ್ಚು ಮಳೆಯಾಗಿದ್ದು, ಹೆಸರು ಕಾಳು ಗುಣಮಟ್ಟ ಹಾಳಾಗಿದೆ. ಬಿತ್ತನೆಯಾಗಿರುವ ಹೆಸರು ಕಾಳು ಬೆಳೆ ಹಾನಿಯಿಂದ ಸಂಪೂರ್ಣ ಕಪ್ಪಾಗಿದ್ದು, ಜಿಲ್ಲೆಯಾದಂತ್ಯ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿ ಮಾಡುವ ಗುರಿ ತಲುಪಲು ಕಷ್ಟ ಸಾಧ್ಯವಾಗುತ್ತಿದೆ. ಸದರಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಬದಲಾಗಿ ರೈತರಿಗೆ ಅನುಕೂಲವಾಗುವ ಹೆಸರು ಕಾಳುಗಳ ಗುಣಮಟ್ಟದ ವರ್ಗೀಕರಣದ ಪ್ರತ್ಯೇಕ ಗ್ರೇಡ್‍ಗಳನ್ನು ಮಾಡಿ ಎಫ್.ಎ.ಕ್ಯೂ ಗುಣಮಟ್ಟದಲ್ಲಿ ಸಡಲಿಕೆ ಮಾಡಿ ದರ ನಿಗದಿಪಡಿಸಿ ಖರೀದಿ ಮಾಡಿದ್ದಲ್ಲಿ ರೈತರಿಗೆ ಅನುಕೂಲವಾಗುತ್ತದೆ ಎಂದು ಧಾರವಾಡ ಜಿಲ್ಲಾಧಿಕಾರಿಗಳು ಸಪ್ಟೆಂಬರ್ 18, 2025 ರಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಗುರಿ ಹೊಂದಿದ 2.46 ಲಕ್ಷ ಹೆಕ್ಟೇರ್ ಪ್ರದೇಶದ ಪೈಕಿ 2.42 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಮೆಕ್ಕೆಜೋಳ, ಭತ್ತ ಹೆಚ್ಚು ಪ್ರದೇಶದಲ್ಲಿದ್ದು, ಮಳೆಯಾಶ್ರಿತ ಪ್ರದೇಶದಲ್ಲಿ ಹೆಸರು ಬೆಳೆ ಕೂಡ ಅತ್ಯಲ್ಪ ಪ್ರಮಾಣದಲ್ಲಿದೆ. ಸೆಪ್ಟೆಂಬರ್‌ ಬಳಿಕ ಸೂರ್ಯಕಾಂತಿ ಬಿತ್ತನೆ ನಡೆಯಲಿದೆ. ಹಿಂಗಾರು ಹಂಗಾಮಿನಲ್ಲಿ ಮತ್ತೆ ಹೆಸರು ಬಿತ್ತನೆಯಾಗುತ್ತದೆ. ಖರೀದಿ ಕೇಂದ್ರ ತೆರೆದರೆ ಉತ್ತಮ ಬೆಲೆ ಸಿಗುತ್ತದೆ.