Home » ಜಿಪಿಎಸ್ (GPS) ಮೂಲಕ ನಿಮ್ಮ ಬೆಳೆ ಸಮೀಕ್ಷೆ ಆರಂಭ.

ಜಿಪಿಎಸ್ (GPS) ಮೂಲಕ ನಿಮ್ಮ ಬೆಳೆ ಸಮೀಕ್ಷೆ ಆರಂಭ.

ಬೆಳೆ ಸಮೀಕ್ಷೆ : ರಾಜ್ಯದಲ್ಲಿ ಸರ್ಕಾರ ರೈತರ ಪರವಾಗಿ ಹೊಸ ಕ್ರಾಂತಿ ಸೃಷ್ಟಿ ಮಾಡಿದೆ. ಏನೆಂದರೆ ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್ ಆಧಾರಿತ ಆಯಂಡ್ರಾಯ್ಡ್ ಮೊಬೈಲ್ ತಂತ್ರಾಂಶವನ್ನು ಬಳಸಿ ರೈತರ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದ್ದಾರೆ.

ಏನಿದು ಜಿಪಿಎಸ್ ಬೆಳೆ ಸಮೀಕ್ಷೆ?

ಈಗಾಗಲೇ ನಿಮಗೆ ತಿಳಿದಿರುವ ಹಾಗೆ 2020- 21 ನೇ ಸಾಲಿನಿಂದ ರೈತರೇ ಸ್ವತಃ ತಮ್ಮ ಜಮೀನಿನಲ್ಲಿ ಬೆಳದ ಬೆಳೆಯನ್ನು ರೈತರ ಆಪ್ ಮೂಲಕ ನಮೂದಿಸಲು ಅವಕಾಶ ಕಲ್ಪಿಸಿದ್ದು, 2024- 25 ನೇ ಸಾಲಿನಲ್ಲಿ ರೈತರ ಬೆಳೆಯ ನೈಜ ಛಾಯಾಚಿತ್ರ ದಾಖಲಾತಿಯನ್ನು ಖಚಿತಪಡಿಸಿಕೊಳ್ಳಲು ಮೊಬೈಲ್ ಆಪ್ ನಲ್ಲಿ ” Tilt angle ಮತ್ತು “AI tool” ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಪ್ರಸ್ತುತ ರೈತರ ಮೊಬೈಲ್ ಆಪ್ ಹಾಗೂ ಖಾಸಗಿ ನಿವಾಸಿಗಳ ಆಪ್ ಮುಖಾಂತರ ಪೂರ್ವ ಮುಂಗಾರು, ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮುಗಳಲ್ಲಿ  ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ರಾಜ್ಯದ ಎಲ್ಲ ರೈತರ ತಾಕುಗಳ ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ.

ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೇ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಘ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ ಕಲ್ಪಿಸಿಲ್ಲ. ಬೆಳೆ ಮಾಹಿತಿ ಕುರಿತಂತೆ ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 4.40 ಕೋಟಿ ತಾಕುಗಳ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸುಮಾರು 2 ಲಕ್ಷ ಆಕ್ಷೇಪಣೆಗಳೂ ಕೂಡ ಸಲ್ಲಿಕೆಯಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಮರು ಮಾಡಿಸಿದ್ದೇವೆ. ಅಧಿಕಾರಿ, ಸಿಬ್ಬಂದಿಗಳು ಎಲ್ಲಿಯೋ ಕುಳಿತು ಬೆಳೆ ಸಮೀಕ್ಷೆ ಮಾಡಲು ಅವಕಾಶ ಇರುವುದಿಲ್ಲ ಎಂದರು.

ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಎಷ್ಟು?

ಕೃಷಿ ಯಾಂತ್ರಿಕರಣ ಯೋಜನೆಯಡಿ ಸಾಮಾನ್ಯ ರೈತರಿಗೆ ಶೇ 50 ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ಗರಿಷ್ಠ ರೂ. 1 ಲಕ್ಷದ ಮೀತಿಯೊಳಗೆ ಸಹಾಯಧನವನ್ನು ನೀಡಲಾಗುತ್ತಿದೆ.
ಟ್ರಾಕ್ಟರ್ ಗಳಿಗೆ (45 HP) ಸಾಮನ್ಯ ರೈತರಿಗೆ ರೂ. 0.75 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ರ ಗರಿಷ್ಠ ರೂ. 3 ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದರು.

ಕೃಷಿ ಸಲಕರಣೆ ಮತ್ತು ಯಂತ್ರೋಪಕರಣಗಳಿಗೆ ರೈತರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, 2025- 26 ನೇ ಸಾಲಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ 428 ಕೋಟಿ ಅನುದಾನ ಮೀಸಲಿಟ್ಟಿದ್ದು, ಇಲ್ಲಿಯವರೆಗೆ 320 ಕೋಟಿ ಅನುದಾನವನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದ್ದು, 271 ಕೋಟಿ ವೆಚ್ಚದಲ್ಲಿ 69722 ರೈತರಿಗೆ ಸಹಾಯಧನ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.

ನಿಮ್ಮ ಗ್ರಾಮದ ಅಭಿವೃದ್ದಿಗೆ ಬಂದ ಹಣವೆಷ್ಟು? ಈಗ ನಿಮ್ಮ ಮೊಬೈಲ್‌ನಲ್ಲೇ ಚೆಕ್‌ ಮಾಡಿ!

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹೊಸ ಅಪ್ಡೇಟ್.

Leave a Reply

Your email address will not be published. Required fields are marked *