ತಾಪಮಾನ ಇಳಿಕೆ : ಸಾರ್ವಜನಿಕರೇ ನಿಮಗೊಂದು ಆಶ್ಚರ್ಯಕರ ಸುದ್ದಿ ಕೊಡುತ್ತೇನೆ. ದಯವಿಟ್ಟು ಯಾರು ಈ ಚಳಿಯ ಬಗ್ಗೆ ಅಷ್ಟು ಹಗುರವಾಗಿ ತೆಗೆದುಕೊಳ್ಳಬೇಡಿ. ರಾಜ್ಯದಲ್ಲಿ ಮೈ ನಡುಗುವ ಚಳಿ ಸೃಷ್ಟಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್, ವಿಜಯಪುರದಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆ ಆಗಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ.
ಎಷ್ಟು ದಿನ ಈ ಚಳಿ ಮುಂದುವರೆಯಲಿದೆ?
ಕರ್ನಾಟಕದ ಅತ್ಯಧಿಕ ಚಳಿ ಹಾಸನ ಜಿಲ್ಲೆಯಲ್ಲಿ ನೆನ್ನೆ ದಾಖಲಾಗಿದೆ. ಹಾಸನದಲ್ಲಿ ಕನಿಷ್ಠ 7.9 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ. ಮೈಕೊರೆವ ಚಳಿ ಜನರ ನಡುಗಿಸಿದೆ. ಅದೇ ರೀತಿ ಉತ್ತರ ಕರ್ನಾಟಕದ ಬೀದರ್ ಮತ್ತು ವಿಜಯಪುರದಲ್ಲಿ ತಲಾ 09 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಡಿಸೆಂಬರ್‌ನಲ್ಲಿ ಚಳಿ, ದಟ್ಟ ಮಂಜಿನ ವಾತಾವರಣ ಅನಾರೋಗ್ಯ ಭೀತಿ ಉಂಟು ಮಾಡಿದೆ. ಈ ಜಿಲ್ಲೆಗಳಲ್ಲಿ ಮುಂದಿನ 03 ದಿನ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಯಾವ ಜಿಲ್ಲೆ ಎಷ್ಟು ತಾಪಮಾನ ಕಡಿಮೆ ಆಗಿದೆ?
ಬಾಗಲಕೋಟೆ 12.1 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 13.8 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 11.6 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 14.1 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 13.6 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 15.2 ಡಿಗ್ರಿ ಸೆಲ್ಸಿಯಸ್, ಬೀದರ್ 10.4 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 12.6 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ 13.8 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು 13 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 14 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 19.1 ಡಿಗ್ರಿ ಸೆಲ್ಸಿಯಸ್, ದಾವಣಗೆರೆ 14.6 ಡಿಗ್ರಿ ಸೆಲ್ಸಿಯಸ್, ಧಾರವಾಡ 12.6 ಡಿಗ್ರಿ ಸೆಲ್ಸಿಯಸ್, ಗದಗ 13.2 ಡಿಗ್ರಿ ಸೆಲ್ಸಿಯಸ್, ಹಾಸನ 12.8 ಡಿಗ್ರಿ ಸೆಲ್ಸಿಯಸ್, ಹಾವೇರಿ 13.5 ಡಿಗ್ರಿ ಸೆಲ್ಸಿಯಸ್, ಕಲಬುರಗಿ 11.9 ಡಿಗ್ರಿ ಸೆಲ್ಸಿಯಸ್, ಕೊಡಗು 13 ಡಿಗ್ರಿ ಸೆಲ್ಸಿಯಸ್, ಕೋಲಾರ 13 ಡಿಗ್ರಿ ಸೆಲ್ಸಿಯಸ್, ಕೊಪ್ಪಳ 12.4 ಡಿಗ್ರಿ ಸೆಲ್ಸಿಯಸ್, ಮಂಡ್ಯ 13.2 ಡಿಗ್ರಿ ಸೆಲ್ಸಿಯಸ್, ಮೈಸೂರು 12.8 ಡಿಗ್ರಿ ಸೆಲ್ಸಿಯಸ್, ರಾಯಚೂರು 13.6 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ 13.7 ಡಿಗ್ರಿ ಸೆಲ್ಸಿಯಸ್, ತುಮಕೂರು 13 ಡಿಗ್ರಿ ಸೆಲ್ಸಿಯಸ್, ಉಡುಪಿ 19 ಡಿಗ್ರಿ ಸೆಲ್ಸಿಯಸ್, ಉತ್ತರ ಕನ್ನಡ 16.5 ಡಿಗ್ರಿ ಸೆಲ್ಸಿಯಸ್, ವಿಜಯಪುರ 12.7 ಡಿಗ್ರಿ ಸೆಲ್ಸಿಯಸ್, ವಿಜಯನಗರ 13.3 ಡಿಗ್ರಿ ಸೆಲ್ಸಿಯಸ್ ಮತ್ತು ಯಾದಗಿರಿಯಲ್ಲಿ 13.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ನಿನ್ನೆ ಬೆಳಿಗ್ಗೆ 8.30ರಿಂದ ಇಂದು ಬೆಳಿಗ್ಗೆ 8.30ರ ಅವಧಿಯಲ್ಲಿ ದಾಖಲಾಗಿದೆ.
ಹಾವೇರಿ ಹಾಗೂ ಧಾರವಾಡ ಜಿಲ್ಲೆಯಲ್ಲಿ 10 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಈ ತಿಂಗಳ ಅತ್ಯಧಿಕ ಚಳಿ ಎನ್ನಲಾಗಿದೆ. ಮೈಕೊರೆವ ಚಳಿ, ನಿರಂತರ ಶೀತ ಗಾಳಿಗೆ ಜನರು ತತ್ತರಿಸಿದ್ದಾರೆ. ಹೆಚ್ಚಿನ ಮಂಜು ಬೀಳುವ ಪ್ರದೇಶಗಳಲ್ಲಿ ಜನರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ. ಡಿಸೆಂಬರ್ 26 ರವರೆಗೆ ಹಲವು ಜಿಲ್ಲೆಗಳಲ್ಲಿ ಶೀತ ಅಲೆ, ಅಧಿಕ ಚಳಿ ಮುನ್ಸೂಚನೆ ನೀಡಲಾಗಿದೆ.
ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಇಂದು ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.
ಸಾರ್ವಜನಿಕರೇ ನಿಮಗೊಂದು ಆಶ್ಚರ್ಯಕರ ಸುದ್ದಿ ಕೊಡುತ್ತೇನೆ. ದಯವಿಟ್ಟು ಯಾರು ಈ ಚಳಿಯ ಬಗ್ಗೆ ಅಷ್ಟು ಹಗುರವಾಗಿ ತೆಗೆದುಕೊಳ್ಳಬೇಡಿ. ರಾಜ್ಯದಲ್ಲಿ ಮೈ ನಡುಗುವ ಚಳಿ ಸೃಷ್ಟಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್, ವಿಜಯಪುರದಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆ ಆಗಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ.