ಪಡಿತರ ಚೀಟಿ : ರೇಷನ್ ಪಡೆಯಲು ಇನ್ಮುಂದೆ OTP ಸಾಕು
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಲಭ, ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಲು ಹೊಸ ಬದಲಾವಣೆಯನ್ನು ಜಾರಿಗೆ ತರಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇನ್ನು ಮುಂದೆ ಫಲಾನುಭವಿಗಳಿಗೆ ಮಾಸಿಕ ಪಡಿತರ ವಿತರಣೆ ಮಾಡುವಾಗ ಒನ್ ಟೈಮ್ ಪಾಸ್‌ವರ್ಡ್ (OTP) ಆಧಾರಿತ ವ್ಯವಸ್ಥೆಯನ್ನು ಬಳಸಲು ತೀರ್ಮಾನಿಸಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಈಗಾಗಲೇ ಬಯೋಮೆಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಸಾವಿರಾರು ಜನರಿಗೆ ದೊಡ್ಡ ಮಟ್ಟದ ನೆರವಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯದಲ್ಲಿ ನ್ಯಾಯಬೆಲೆ ಅಂಗಡಿಗಳ ಮೂಲಕ ಅಕ್ಕಿ,…
