ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಿ
ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ ಈಗಾಗಲೇ ಕೃಷಿ ಹೊಂಡಗಳು, ಇತರೆ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಲು ಅರ್ಜಿ ಆಹ್ವಾನ ಕರೆದಿದ್ದು ಹಲವಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಕರೆದಿದ್ದು ಕೃಷಿಭಾಗ್ಯ ಯೋಜನೆಯು ಮರು ಜಾರಿಗೊಂಡಿದ್ದು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತ ಬಾಂಧವರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ 2014-15…
