Home » ನಾಳೆಯ ಹವಾಮಾನ: 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹೇಗಿರಲಿದೆ ರಾಜ್ಯದ ವಾತಾವರಣ?

ನಾಳೆಯ ಹವಾಮಾನ: 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹೇಗಿರಲಿದೆ ರಾಜ್ಯದ ವಾತಾವರಣ?

ನಾಳೆಯ ಹವಾಮಾನ : ರಾಜ್ಯದ ಹಲವೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?

ದಕ್ಷಿಣ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಒಣ ಹವೆ?

ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡು ಭಾಗದ ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿಯೂ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಲ್ಲಿಯೂ ಮಳೆ ಸಾಧ್ಯತೆ

ಬೆಂಗಳೂರಲ್ಲಿ ನಾಳೆ ಭಾಗಶಃ ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇರಲಿದೆ. ಗರದ ಕೆಲವೆಡೆ ಬೆಳಗ್ಗಿನ ಜಾವ ಮಂಜು ಮುಸುಕಿದ ವಾತಾವರಣ ಕಾಣಸಿಗಲಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನ ಒಣ ಹವೆ ಮುಂದುವರಿಯಲಿದೆ. ಆನಂತರ ಕೆಲವು ಕಡೆ ಕನಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಬೀದರ್‌ ಹಾಗೂ ದಾವಣಗೆರೆಯಲ್ಲಿ ಶುಕ್ರವಾರ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ ಎಂದು ಕೇಂದ್ರದ ಬೆಂಗಳೂರು ಮುಖ್ಯಸ್ಥ ಎನ್‌.ಪುವಿಯರಸನ್‌ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಕಳಸ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಹಾಸನ ಜಿಲ್ಲೆಯ ಅರಕಲಗೂಡು, ಉಡುಪಿ ಜಿಲ್ಲೆಯ ಕೋಟ ಭಾಗದಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ತುಂತುರು ಮಳೆಯಾಗಿದೆ ಎಂದು ತಿಳಿಸಿದ್ದಾರೆ.

ಡಿ. 10ರವರೆಗೆ ವರುಣ ಕಾಟ ಕೊಡಲಿದ್ದಾನೆ

ಎಲ್ಲೆಲ್ಲಿ ಮಳೆ..?

ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಡಿ 9 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಚಳಿ ವಾತಾವರಣ..!

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಳಿ ಹೆಚ್ಚಾಗಲಿದ್ದು, ಮಳೆಯೂ ಕಾಡಲಿದೆ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *